November 25, 2021
ಕುಂದಾಪುರ: ನವೆಂಬರ್‌ರಲ್ಲಿ ನಡೆದ ಸಿ.ಎಸ್.ಇ.ಇ.ಟಿ. ಪರೀಕ್ಷೆಯಲ್ಲಿ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು 87% ಫಲಿತಾಂಶ ಪಡೆದಿದ್ದಾರೆ. ಒಟ್ಟು 23 ವಿದ್ಯಾರ್ಥಿಗಳು ಸಿ.ಎಸ್. ಪರೀಕ್ಷೆ ಬರೆದಿದ್ದು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ತೇರ್ಗಡೆ ಹೊಂದಿದ ಎಲ್ಲಾ ವಿದ್ಯಾರ್ಥಿಗಳಿಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಇದರ ಅಧ್ಯಕ್ಷರು ಹಾಗೂ ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರು ಶುಭ ಹಾರೈಸಿದರು.
ದ್ವಿತೀಯ ಬಿ.ಕಾಂ.ನ ತೇಜಸ್ 84.5% ಹಾಗೂ ಧ್ವನಿ ಶೆಟ್ಟಿ 84.5% ಅಂಕಗಳೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ನಮ್ಮ ಸಂಸ್ಥೆಯ ಹೆಮ್ಮೆ ಎಂದು ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿಯವರು ಅಭಿನಂದನೆ ತಿಳಿಸಿದ್ದಾರೆ.