December 7, 2021
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ ಹಾಗೂ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನ- 2021 ಮತ್ತು 75ನೇ ವರ್ಷದ ಸ್ವತಂತ್ರ ದಿನವನ್ನು ಆಚರಿಸುವ (New India @75) ಪ್ರಯುಕ್ತ ಹೆಚ್‌ಐವಿ / ಏಡ್ಸ್ ಬಗ್ಗೆ ಅರಿವು ಮೂಡಿಸಲು ಕಾಲೇಜಿನ ವಿದ್ಯಾರ್ಥಿಗಳಿಗೆ ಭಿತ್ತಿ ಚಿತ್ರ ಸ್ಪರ್ಧೆಯನ್ನು ಡಿ,6. ರಂದು ಹಮ್ಮಿಕೊಳ್ಳಲಾಯಿತು.
ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯ ಕೌನ್ಸಿಲರ್ ಶ್ರೀಮತಿ ನಳಿನಾಕ್ಷಿ ವಿದ್ಯಾರ್ಥಿಗಳಿಗೆ ಭಿತ್ತಿ ಚಿತ್ರ ಸ್ಪರ್ಧೆಯ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ಸಹ ಯೋಜನಾಧಿಕಾರಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ಸರಿಸುಮಾರು 43 ವಿದ್ಯಾರ್ಥಿಗಳು ಭಿತ್ತಿ ಚಿತ್ರ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.