Banner

December 7, 2021

ಕುಂದಾಪುರದ ಡಾ‌.ಬಿ.ಬಿ. ಹೆಗ್ಡೆ  ಕಾಲೇಜಿನಲ್ಲಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕ್ ಘಟಕ ಕಾರ್ಯದರ್ಶಿ ವೈ. ಸೀತರಾಮ ಶೆಟ್ಟಿ ಕಾರ್ಯಕ್ರಮ ಡಿಸೆಂಬರ್ 07ರಂದು ಉದ್ಘಾಟಿಸಿ ಮಾತನಾಡಿದರು. ರೆಡ್ ಕ್ರಾಸ್ ಸಂಸ್ಥೆಯ ಕಾರ್ಯವೈಖರಿಯನ್ನು , ಅದರ ಮಹತ್ವವನ್ನು ವಿವರಿಸುತ್ತ ಇಂದಿನ ಯುವ ಪೀಳಿಗೆ ಸಮಾಜಮುಖಿ ಕೆಲಸಗಳಲ್ಲಿ ಸಾದ್ಯವಾದಷ್ಟು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಭಾರತೀಯ ರೆಡ್‌ ಕ್ರಾಸ್‌ನ ಖಜಾಂಚಿ ಶಿವರಾಮ ಶೆಟ್ಟಿ ಸ್ವಯಂ ಸೇವಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ‌‌.ಉಮೇಶ್ ಶೆಟ್ಟಿ ಮಾತನಾಡಿ, ಯುವಶಕ್ತಿ ರಕ್ತದಾನದ ಮೂಲಕ ಇನ್ನೊಬ್ಬರ ಜೀವ ಉಳಿಸುವುದರ ಮಹತ್ವದ ಬಗ್ಗೆ ತಿಳಿಸಿ ರಕ್ತದಾನ ಮಾಡುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ  ಸದಸ್ಯರಾದ ಗಣೇಶ್ ಆಚಾರ್ ಉಪಸ್ಥಿತರಿದ್ದರು. ಕಾಲೇಜು ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.  ಉಪನ್ಯಾಸಕ ಹರೀಶ್ ನಿರೂಪಿಸಿ, ಯುವ ರೆಡ್ ಕ್ರಾಸ್ ಘಟಕದ ಸಹ ಸಂಯೋಜಕಿ ಮಾಲತಿ ವಂದಿಸಿದರು.ಕಾಲೇಜು ಸಿಬ್ಬಂದಿ ವರ್ಗ ಹಾಗೂ ವಿಧ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

© 2022 Dr. B. B. Hegde First Grade College, Kundapura - All Rights Reserved