December 15, 2021
ಕೂನ್ನೂರು ಬಳಿ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಪಡೆ ಮುಖ್ಯಸ್ಥ(CDS) ಜ.ಬಿಪಿನ್ ರಾವತ್ ದಂಪತಿ ಸೇರಿದಂತೆ, ಹುತಾತ್ಮರಾದ ಎಲ್ಲಾ ವೀರ ಯೋಧರಿಗೆ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಡಿಸೆಂಬರ್ 15ರಂದು ದೀಪ ನಮನ ಸಲ್ಲಿಸಲಾಯಿತು.
ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು, ಬೋಧಕ ಬೋಧಕೇತರರು ಕೈಯಲ್ಲಿ ಮೇಣದ ದೀಪ ಬೆಳಗಿಸಿ, ದೇಶಭಕ್ತಿ ಗೀತೆ ಹಾಡುವುದರ ಮೂಲಕ ಹುತಾತ್ಮರ ಆತ್ಮಕ್ಕೆ ದೀಪ ಪ್ರಜ್ವಲನದ ಶ್ರದ್ಧಾಂಜಲಿ ಸಲ್ಲಿಸಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ, ಭಾರತೀಯ ಸೇನಾಪಡೆಯ ಯೋಧ ಪ್ರಶಾಂತ್ ದೇವಾಡಿಗ., ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ, ಸಂಸ್ಥೆಯ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ, ಎನ್‌ಸಿಸಿ ಅಧಿಕಾರಿ ಶಿವರಾಜ್ ಸಿ, ಸಹ ಸಂಯೋಜಕ ಸುಜಯ್, ಬೋಧಕ ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.