January 12, 2022
ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ಎನ್.ಎಸ್.ಎಸ್ ಉಡುಪಿ ಜಿಲ್ಲಾ ನೋಡಲ್ ಅಧಿಕಾರಿ ಶ್ರೀ ಪ್ರವೀಣ್ ಶೆಟ್ಟಿಯವರು ನೆರವೇರಿಸಿದರು. ಉದ್ಘಾಟನಾ ನೆಲೆಯ ಮಾತುಗಳನ್ನಾಡಿದ ಅವರು, ಎನ್.ಎಸ್.ಎಸ್‌ನ ಮಹತ್ವ ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಎನ್.ಎಸ್.ಎಸ್ ಪಾತ್ರದ ಕುರಿತು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ ತನ್ನ ಎನ್.ಎಸ್.ಎಸ್ ಅನುಭವವನ್ನು ಹಂಚಿಕೊಂಡರು.
ಕಾಲೇಜಿನ ಎನ್.ಎಸ್.ಎಸ್ ಘಟಕದ ಯೋಜನಾಧಿಕಾರಿ ಶ್ರೀ ಪ್ರವೀಣ್ ಮೊಗವೀರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಸಂಪತ್ ಶೆಟ್ಟಿ, ಅನುಷಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎನ್.ಎಸ್.ಎಸ್. ಸ್ವಯಂಸೇವಕರು ಎನ್.ಎಸ್.ಎಸ್ ಗೀತೆ ಹಾಡಿದರು. ವಿಘ್ನೇಶ್ ಶೆಟ್ಟಿ ಸ್ವಾಗತಿಸಿದರು. ಶಶಿಕಲಾ ಅತಿಥಿಯನ್ನು ಪರಿಚಯಿಸಿದರು. ಸುರಕ್ಷ್ ವಂದಿಸಿ, ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು.