January 21, 2022
- ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿಗಳು ವಂಡ್ಸೆ ಗ್ರಾಮ ಪಂಚಾಯತ್‌ನ ಘನ ಮತ್ತು ದ್ರವ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ವಿಸ್ತರಣಾ ಚಟುವಟಿಕೆಯ ಅಂಗವಾಗಿ ಭೇಟಿ ನೀಡಿದ ವಿದ್ಯಾರ್ಥಿಗಳು, ತ್ಯಾಜ್ಯ ನಿರ್ವಹಣೆಯ ಕುರಿತಂತೆ ಸಂಪೂರ್ಣ ಮಾಹಿತಿಗಳನ್ನು ಪಡೆದರು. ಭೇಟಿಯ ಸಂದರ್ಭದಲ್ಲಿ ರಾಜ್ಯದಲ್ಲಿಯೇ ಮಾದರಿ ತ್ಯಾಜ್ಯ ನಿರ್ವಹಣಾ ಘಟಕವಾಗಿ ರೂಪಿಸಿದ ರೂವಾರಿಗಳು, ವಂಡ್ಸೆ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಅಡಿಕೆಕೋಡ್ಲು ಅವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಕಸದ ಸಂಗ್ರಹಣೆ, ಅದರ ವಿಭಾಗಿಸುವಿಕೆ, ಕಸದ ಮೌಲ್ಯ, ಸ್ವಚ್ಛ ಪರಿಸರದ ಅಗತ್ಯತೆಯ ಸವಿಸ್ತಾರ ಮಾಹಿತಿ ತಿಳಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕಿ ಜ್ಯೋತಿ ಮೊಗವೀರ, ಡಾ. ದೀಪಾ ಹಾಗು ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ನೈಕಂಬ್ಳಿ ಉಪಸ್ಥಿತರಿದ್ದರು.