• October 28, 2021

 ವಿದ್ಯಾರ್ಥಿಗಳು ಬದುಕಿನಲ್ಲಿ  ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು, ಆ ಮೂಲಕ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಾಧ್ಯ ಎಂದು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ ಉಮೇಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬಿಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕೆನರಾ ಬ್ಯಾಂಕ್ ವಡೇರಹೊಬಳಿ ಶಾಖೆಯ ಮುಖ್ಯ ಪ್ರಬಂಧಕರಾದ ಶ್ರೀ ಜಗದೀಶ್ ಪೂಜಾರಿ ವಿದ್ಯಾರ್ಥಿಗಳಿಗೆ ಸ್ಪೂರ್ತಿಯುತ ಮಾತುಗಳನ್ನಾಡಿದರು‌.  ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ‌ಕಾರ್ಯದರ್ಶಿ  ಸಂಪತ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ವೀಣಾ ಭಟ್, ನಂದಾ ರೈ, ಪ್ರವೀಣ್ ಮೊಗವೀರ, ಸುಕುಮಾರ್ ಶೆಟ್ಟಿ, ಸೌಮ್ಯ ಕುಂದರ್  ಹಾಗೂ ವಿದ್ಯಾರ್ಥಿಗಳಾದ ಸುಪ್ರೀತಾ, ಸಂಪತ್, ಸೋನಲ್, ಗಾಯತ್ರಿ, ಅನನ್ಯ, ಪ್ರಸನ್ನ, ಕಾವ್ಯ, ಸುಚಿತ್ರಾ, ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ವಿದ್ಯಾರ್ಥಿನಿ ಸಾಯಿವಿಜೇತ ಪ್ರಾರ್ಥಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಿವರಾಜ್ ಸಿ ಅರೆಹೊಳೆ ವಂದಿಸಿ,  ಇಂಗ್ಲಿಷ್ ಉಪನ್ಯಾಸಕಿ ದೀಪಿಕಾ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಬೋಧಕರು ಮತ್ತು ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

© 2021 Dr. B. B. Hegde First Grade College, Kundapura - All Rights Reserved